ಭಾರೀ ಮಳೆ ಮಂಗಳೂರು, ಬಂಟ್ವಾಳ, ಉಳ್ಳಾಲ ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 19) ರಜೆ ಘೋಷಣೆ
ಮಂಗಳೂರು: ಮಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು, ಬಂಟ್ವಾಳ, ಉಳ್ಳಾಲ, ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 19.07.2025 ರಂದು (ಶನಿವಾರ) ರಜೆ ಘೋಷಿಸಿ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ.