ಬಂಧುತ್ವ ಚಾರಿಟೇಬಲ್ ಟ್ರಸ್ಟ್ ದ.ಕ.ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷರಾಗಿ ಜಮೀಲಾ ಬಾನು ನೇಮಕb
ಮಂಗಳೂರು: ಬಂಧುತ್ವ ಚಾರಿಟೇಬಲ್ ಟ್ರಸ್ಟ್ ದ.ಕ.ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಜಮೀಲಾ ಬಾನು ಆಯ್ಕೆಯಾಗಿದ್ದಾರೆ.
ಸಾಮಾಜಿಕ ಕಾರ್ಯಕರ್ತೆಯಾಗಿರುವ ಜಮೀಲಾ ಬಾನು ಅವರನ್ನು ಬಂಧುತ್ವ ಚಾರಿಟೇಬಲ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಹೆ.ಚ್.ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಯವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಸಮಾಜದ ಕಟ್ಟ ಕಡೆಯಲ್ಲಿರುವವರ ಏಳಿಗೆಗಾಗಿ ದುಡಿಯುತ್ರಿರುವ ಬಂಧುತ್ವ ಚಾರಿಟೇಬಲ್ ಟ್ರಸ್ಟ್ ದ.ಕ.ಜಿಲ್ಲಾ ಮಹಿಳಾ ಘಟಕ ಸ್ತ್ರೀ ಶಕ್ತಿಯನ್ನು ಬಳಸಿಕೊಂಡು ಜಮೀಲಾ ಬಾನು ಅವರ ನೇತೃತ್ವದಲ್ಲಿ ಸಮಾಜದ ಅಭ್ಯುದಯಕ್ಕಾಗಿ ದುಡಿಯಲಿದೆ ಎಂದು ಬಂಧುತ್ವ ಚಾರಿಟೇಬಲ್ ಟ್ರಸ್ಟ್ ಪ್ರಕಟಣೆ ತಿಳಿಸಿದೆ.