ಧರ್ಮಸ್ಥಳ ಪ್ರಕರಣ ; ಸುಳ್ಳು ಮಾಹಿತಿಯಿರುವ ವಿಡಿಯೋ ಪ್ರಸಾರ ಆರೋಪ, ಯೂಟ್ಯೂಬರ್ ಸಮೀರ್ ವಿರುದ್ಧ FIR ದಾಖಲು
ಮಂಗಳೂರು: ಧರ್ಮಸ್ಥಳದಲ್ಲಿ ಹಲವು ಕೊಲೆಗಳನ್ನು ಮಾಡಿದ್ದು ಹೆಣಗಳನ್ನು ತಾನೇ ಹೂತು ಹಾಕಿದ್ದೇನೆಂದು ವ್ಯಕ್ತಿಯೊಬ್ಬರು ನೀಡಿರುವ ದೂರಿನ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈಗಾಗಲೇ ತಾನು ಅಗೆದು ತೆಗೆದಿದ್ದೇನೆಂದು ಹೇಳಿರುವ ಅಸ್ಥಿಪಂಜರದ ತುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಧರ್ಮಸ್ಥಳದಲ್ಲಿ ಹಲವು ಕೊಲೆಗಳನ್ನು ಮಾಡಿದ್ದು ಹೆಣಗಳನ್ನು ತಾನೇ ಹೂತು ಹಾಕಿದ್ದೇನೆಂದು ವ್ಯಕ್ತಿಯೊಬ್ಬರು ನೀಡಿರುವ ದೂರಿನ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈಗಾಗಲೇ ತಾನು ಅಗೆದು ತೆಗೆದಿದ್ದೇನೆಂದು ಹೇಳಿರುವ ಅಸ್ಥಿಪಂಜರದ ತುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ನಡುವೆ, ಘಟನೆ ಕುರಿತಾಗಿ ಆಭಾಸಕರ ವರದಿ ಮಾಡಿರುವ ಬಗ್ಗೆ ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ. ದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ, ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರೆ ಹೆಚ್ಚಿನ ಮಾಹಿತಿಗಳನ್ನು ಒಳಗೊಂಡಿರುವ ಕಾಲ್ಪನಿಕವಾಗಿ (AI) ಸೃಷ್ಟಿಸಲಾದ, ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಲಾಗಿದ್ದು ಉದ್ದೇಶಪೂರ್ವಕ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಹಿನ್ನೆಲೆಯಲ್ಲಿ ಸಮೀರ್ ಎಂ.ಡಿ ಎಂಬ ಯೂಟ್ಯೂಬರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಕ್ರ ಸಂಖ್ಯೆ .5: 42/2025 00: 192, 240, 353(1)(b) bNS ರಂತೆ ಪ್ರಕರಣ ದಾಖಲಿಸಲಾಗಿದೆ.
ಇದಲ್ಲದೆ, ಜುಲೈ 11ರಂದು ಸಾಕ್ಷಿ ದೂರುದಾರರ ಪರವಾದ ವಕೀಲರು ಪತ್ರಿಕಾಗೋಷ್ಠಿಯಲ್ಲಿ ನೀಡಿರುವ ಕೆಲವು ಹೇಳಿಕೆಗಳು ತಪ್ಪಾಗಿರುತ್ತದೆ ಎಂದು ದ.ಕ. ಎಸ್ಪಿ ಅರುಣ್ ಅಭಿಪ್ರಾಯ ಪಟ್ಟಿದ್ದಾರೆ. ಇದೇ ವೇಳೆ, ಸದ್ರಿ ಪ್ರಕರಣದ ತನಿಖಾಧಿಕಾರಿಯನ್ನು ಬದಲಾಯಿಸಲು ಅಥವಾ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸಲು ಸಾರ್ವಜನಿಕ ಹಿತಾಸಕ್ತಿಯ ಹೆಸರಿನಲ್ಲಿ ಕೆಲವು ಗುಂಪನ್ನು ಪ್ರತಿನಿಧಿಸುತ್ತಿರುವ ವ್ಯಕ್ತಿಗಳು ಹೇಳುತ್ತಿರುವ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ದೂರುದಾರರ ಪರವಾದ ವಕೀಲರಿಗೆ ಅರಿವಿದೆಯೇ ಎಂಬುದನ್ನು ಹಾಗೂ ಬಗ್ಗೆ ಸಾಕ್ಷಿ ದೂರುದಾರರ ನಿಲುವೇನು ಎಂಬುದನ್ನು ದೃಢಪಡಿಸಿಕೊಳ್ಳಬೇಕಾಗಿದೆ ಎಂದು ಎಸ್ಪಿ ಪ್ರತಿಕ್ರಿಯಿಸಿದ್ದಾರೆ.