BREAKING NEWS: ನಾಳೆ (ಆಗಸ್ಟ್ 18) ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ಶಾಲೆಗಳಿಗೆ ರಜೆ ಘೋಷಣೆ



ಮಂಗಳೂರು: ದ.ಕ.ಜಿಲ್ಲಾದ್ಯಂತ ಆಗಸ್ಟ್ 18ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 18ರಂದು ಅಂಗನವಾಡಿಯಿಂದ ಹತ್ತನೇ ತರಗತಿವರೆಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪ್ರಕಟಣೆ
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ರವರ ಮುನ್ಸೂಚನೆಯಂತೆ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ದಿನಾಂಕ: 18/08/2025 ರಂದು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಇರುತ್ತದೆ. ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

1. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 18-08-2025 ರಂದು ರಜೆಯನ್ನು ಘೋಷಿಸಲಾಗಿರುತ್ತದೆ.

2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು. ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

5. ಪ್ರವಾಸಿಗರು/ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

6. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ನನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.

+ ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.
ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ
24*7 ಕಂಟ್ರೋಲ್ ರೂಂ - 1077/0824 2442590


Next Post Previous Post