ಪಾಣಾಜೆ ಸುಬೋಧ ಪ್ರೌಢಶಾಲೆಯ ಬಾಲಕಿಯರ ತಂಡ ರನ್ನರ್ ಅಪ್
ಪಾಣಾಜೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸೈ0ಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಕಡಬ ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಕಡಬದಲ್ಲಿ ಜರಗಿದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಯ ಬಾಲಕಿಯರ ತಂಡ ಫೈನಲ್ ಮ್ಯಾಚ್ ನಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದೆ.
ದೈಹಿಕ ಶಿಕ್ಷಣ ಶಿಕ್ಷಕರಾದ ಸುಧೀರ್ ಎಸ್ ಪಿ ಅವರು ಮಕ್ಕಳಿಗೆ ತರಬೇತಿ ನೀಡಿದ್ದರು ಎಂದು ಶಾಲಾ ಸಂಚಾಲಕರಾದ ಗಿಳಿಯಾಲು ಮಹಾಬಲೇಶ್ವರ ಭಟ್ ತಿಳಿಸಿರುತ್ತಾರೆ.