ಡಾ.ಹಾಜಿ.ಯಸ್.ಅಬೂಬಕ್ಕರ್ ಆರ್ಲಪದವು ಇವರಿಂದ ಪುತ್ತೂರು ಶಾಸಕರಿಗೆ ಸನ್ಮಾನ


ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರೂ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಡಾ.ಹಾಜಿ.ಯಸ್.ಅಬೂಬಕ್ಕರ್ ಆರ್ಲಪದವು ಇವರು ಶಾಸಕರಾದ ಅಶೋಕ್ ಕುಮಾರ್ ರೈ ಯವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿ ಶಾಲು ಹಾಕಿ ಸನ್ಮಾನಿಸಿದರು. 



ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕೆಪಿಸಿಸಿ ಸಂಯೋಜಕರಾದ ಹೇಮನಾಥ ಶೆಟ್ಟಿ ಕಾವು, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಶ್ರೀಪ್ರಸಾದ್ ಪಾಣಾಜೆ, ಬೆಟ್ಟಂಪಾಡಿ ಗ್ರಾ.ಪಂ.ಸದಸ್ಯರಾದ ಮೊಯಿದು ಕುಂಞ ಕೋನಡ್ಕ, ಪಾಣಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸದಾನಂದ ನಾಯ್ಕ ಭರಣ್ಯ, ಬೆಟ್ಟಂಪಾಡಿ ವಲಯ ಮಾಜಿ ಅಧ್ಯಕ್ಷ ಮಾಧವ ಪೂಜಾರಿ ರೆಂಜ , ಮುಖಂಡರಾದ ಹನೀಫ್ ಪುಂಚತ್ತಾರು, ಇಸ್ಮಾಯಿಲ್ ಸಾಲ್ಮರ ಮತ್ತಿತರರು ಉಪಸ್ಥಿತರಿದ್ದರು.
Next Post Previous Post