BIKLU SHIVA: `ಬಿಕ್ಲು ಶಿವ' ಹತ್ಯೆ ಕೇಸ್- ಮಾಜಿ ಸಚಿವ ಬೈರತಿ ಬಸವರಾಜುಗೆ ಬಂಧನ ಭೀತಿ!
ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಸಿಐಡಿ ಪೊಲೀಸರು ಕರ್ನಾಟಕ ಹೈಕೋರ್ಟ್‌ನಲ್ಲಿ ಅವರ ಬಂಧನ ಅಗತ್ಯವಿರುವಂತೆ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆಯಲ್ಲಿ ಪ್ರಾಸಿಕ್ಯೂಷನ್ ಪರ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟಆಫ್ರ್ಆಫ್ (ಎಸ್‌ಪಿಪಿ) ಬಿ.ಎನ್.ಜಗದೀಶ್ ಅವರು ಬೈರತಿ ಬಸವರಾಜ್ ವಿಚಾರಣೆಯ ಸಂದರ್ಭದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಹೈಕೋರ್ಟ್‌ಗೆ ವಾದಮಾಡಿದ್ದಾರೆ. ಹೈಕೋರ್ಟ್ ಈ ಕುರಿತು ಮುಂದಿನ ಕ್ರಮವನ್ನು ನಿರ್ಧರಿಸಲಿದೆ.
ಬೈರತಿ ಬಸವರಾಜ್ ವಿಚಾರಣೆಯ ಸಂದರ್ಭದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಿಐಡಿ ಪೊಲೀಸರ ಅರ್ಜಿಗೆ ಬೈರತಿ ಬಸವರಾಜ್ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕಳೆದ ಒಂದು ತಿಂಗಳಿನಿAದ ವಿಚಾರಣೆಗೇ ಕರೆದಿಲ್ಲ. ಈ ಹಿಂದೆ ಪೊಲೀಸರು ಕರೆದಾಗಲೆಲ್ಲಾ ವಿಚಾರಣೆಗೆ ಸಹಕರಿಸಿದ್ದಾರೆ.
ಈಗ ಬಂಧನದ ಅಗತ್ಯವಿದೆ ಎಂದು ಹೇಳುತ್ತಿದ್ದಾರೆ ಎಂದು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವುದಾಗಿ ಹಿರಿಯ ವಕೀಲ ಸಂದೇಶ್ ಚೌಟ ವಾದಿಸಿದ್ದಾರೆ. ರಾಜಕೀಯ ದೃಷ್ಟಿಯಿಂದ ಕಿರುಕುಳ ನೀಡಬಾರದು. ಎಷ್ಟು ದಿನಗಳ ಕಸ್ಟಡಿ ಬೇಕೆಂದು ಕೋರ್ಟ್ಗೆ ತಿಳಿಸಿ ಎಸ್‌ಪಿಪಿಗೆ ನ್ಯಾ. ಎಂ.ಐ.ಅರುಣ್ ಅವರಿದ್ದ ಪೀಠ ಕೇಳಿದೆ. ಅ.8 ರೊಳಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರಿಗೆ ಹೈಕೋರ್ಟ್ ಸೂಚನೆ ನೀಡಿದೆ.