BREAKING NEWS: ಕೇಂದ್ರದಿಂದ ನಂದಿನಿ GST ಇಳಿಕೆ: ಹಾಲು & ಮೊಸರು ಹೊರತುಪಡಿಸಿ ನಂದಿನಿ ಉತ್ಪನ್ನಗಳ ಬೆಲೆ ಇಳಿಕೆ
ಬೆಂಗಳೂರು: ಕರ್ನಾಟಕ ಮಿಲ್ಕ್ ಫೆಡರೇಶನ್ (ಕೆಎಂಎಫ್) ತನ್ನ ನಂದಿನಿ ಉತ್ಪನ್ನಗಳ ಮೇಲೆ ಜಿಎಸ್‌ಟಿ ಇಳಿಕೆಯಿಂದ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಬರುವ ಸೆಪ್ಟೆಂಬರ್ 22ರಿಂದ ಹಾಲು ಮತ್ತು ಮೊಸರು ಹೊರತುಪಡಿಸಿ ಇತರ ಎಲ್ಲಾ ನಂದಿನಿ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ.
ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಜಿಎಸ್‌ಟಿ ದರ ಕಡಿತ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ, ಇದರಿಂದ ಹಾಲು ಉತ್ಪನ್ನಗಳು ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯಲಿವೆ.
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ, ಬೆಂಗಳೂರು-560029
ಕಹಾಮ/ಮಾರುಕಟ್ಟೆ/ಪಪ್ರ/2025-26
ದಿನಾಂಕ: 20.09.2025
ವಿಷಯ: ಹಾಲಿನ ಉತ್ಪನ್ನಗಳ ಮೇಲಿನ ಜಿಎಸ್ಟಿ ಇಳಿಕೆಯಿಂದಾಗಿ 'ನಂದಿನಿ' ಹಾಲಿನ ಉತ್ಪನ್ನಗಳ ಮಾರಾಟ ದರ ಪರಿಷ್ಕರಣೆ ಮಾಡಿರುವ ಬಗ್ಗೆ.
ಕೇಂದ್ರ ಸರ್ಕಾರವು ಸಾರ್ವಜನಿಕರ ದೈನಂದಿನ ಬಳಕೆಯ ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌ಟಿ(Goods and Services Tax-GST) ಯನ್ನು ಇಳಿಕೆ ಮಾಡಿದ್ದು ದಿನಾಂಕ: 22.09.2025 ರಿಂದ ಕಡ್ಡಾಯವಾಗಿ ಎಲ್ಲಾ ಆಹಾರ ಉತ್ಪನ್ನಗಳ ತಯಾರಿಕಾ ಮತ್ತು ಮಾರಾಟ ಸಂಸ್ಥೆಗಳು ಜಾರಿಗೊಳಿಸುವಂತೆ ತಿಳಿಸಲಾಗಿದೆ. ಅದರಂತೆ ಕೆಎಂಎಫ್ ಸಂಸ್ಥೆಯ ನಂದಿನಿ ಉತ್ಪನ್ನಗಳ ಮಾರಾಟ ದರ ಪರಿಷ್ಕರಣೆ ಮಾಡಲಾಗಿದ್ದು, ವಿವರಗಳು ಈ ಕೆಳಕಂಡಂತಿದೆ.