ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಗೆ ಪ್ರಥಮ ಸ್ಥಾನ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ದ.ಕ.ಜಿ.ಪ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಪಾಣಾಜೆ ಇದರ ಸಂಯುಕ್ತ ಆಶ್ರಯದಲ್ಲಿ ನಿನ್ನೆ ಪಾಣಾಜೆಯಲ್ಲಿ ಜರಗಿದ ಪುತ್ತೂರು ಗ್ರಾಮಾಂತರ ವಲಯ ಮಟ್ಟದ 14 ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸುಬೋಧ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದಿದೆ.
ಹೆಮ್ಮೆಯ ತಂಡಕ್ಕೆ ದೈಹಿಕ ಶಿಕ್ಷಣ ಶಿಕ್ಷಕರಾದ ಸುಧೀರ್ ಎಸ್ ಪಿ ಅವರು ತರಬೇತಿ ನೀಡಿದ್ದರು ಎಂದು ಶಾಲಾ ಸಂಚಾಲಕರಾದ ಗಿಳಿಯಾಲು ಮಹಾಬಲೇಶ್ವರ ಭಟ್ಟರು ತಿಳಿಸಿರುತ್ತಾರೆ.