BREAKING: ಅಶೋಕ ಜನಮನ-2025 ಕಾರ್ಯಕ್ರಮದಲ್ಲಿ ನೂಕು ನುಗ್ಗಲು: 11 ಜನರು ಅಸ್ವಸ್ಥ


ಪುತ್ತೂರು:  ಅಶೋಕ ಜನಮನ-2025 ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿದ್ದು, 11 ಜನರು ಅಸ್ವಸ್ಥರಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.



ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ-2025 ಕಾರ್ಯಕ್ರ ಆಯೋಜಿಸಲಾಗಿತ್ತು.



ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಆಗಮಿಸಿ ಉದ್ಘಾಟನೆ ಮಾಡಿದ್ದರು. ಸಿಎಂ ಆಗಮನ ಹಿನ್ನೆಲೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಆಗಮಿಸಿದೆ. ಕ್ರೀಡಾಂಗಣದ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಿಕ್ಕಿರಿದು ನೆರೆದಿದ್ದಾರೆ. ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಸಿಎಂ ಸಿದ್ದರಾಮಯ್ಯ ವೇದಿಕೆಯಿಂದ ತೆರಳುತ್ತಿದ್ದಂತೆ ಕ್ರೀಡಾಂಗಣದಲ್ಲಿ ನೂಕು ನುಗ್ಗಲು ಉಂಟಾಗಿದೆ.

ಕಿಕ್ಕಿರಿದು ನೆರೆದಿದ್ದ ಜನರ ಮಧ್ಯೆ ಉಸಿರಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ನೂಕಾಟ ತಳ್ಳಾಟ ನಡೆದಿದ್ದು, ಮಹಿಳೆಯರು, ಮಕ್ಕಳು ಸೇರಿ 11 ಜನರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನು ಪುತ್ತೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

Next Post Previous Post