ಕಾಗೇರಿಯಿಂದ ದುರುದ್ದೇಶಪೂರಿತ, ಆಧಾರರಹಿತ ಆರೋಪ: ಸ್ಪೀಕರ್ ಯು.ಟಿ.ಖಾದರ್


ಬೆಂಗಳೂರು: ''ಸಂಸದ ವಿಶ್ವೇಶರ ಹೆಗಡೆ ಕಾಗೇರಿ ತನ್ನ ವಿರುದ್ಧ ಮಾಡಿರುವ ಆರೋಪ ಸಂಪೂರ್ಣ ದುರುದ್ದೇಶಪೂರಿತ ಮತ್ತು ಆಧಾರರಹಿತ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.


'ಯು.ಟಿ.ಖಾದರ್ ವಿಧಾನಸಭೆಯ ಸ್ಪೀಕರ್ ಆಗಿರುವ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ' ಎಂದು ಮಾಜಿ ಸ್ಪೀಕರ್ ಹಾಗೂ ಹಾಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಡಿರುವ ಆರೋಪಕ್ಕೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.


''ವಿಶ್ವೇಶರ ಹೆಗಡೆ ಆರೋಪ ಮಾಡಿರುವಂತಹ ಯಾವುದೇ ಅಕ್ರಮ ನಡೆದಿಲ್ಲ. ಎಲ್ಲಾ ಅಭಿವೃದ್ಧಿ ಕೆಲಸಗಳು ನೀತಿ, ನಿಯಮಗಳ ಪ್ರಕಾರವೇ ನಡೆದಿವೆ. ಅಭಿವೃದ್ಧಿ ಕೆಲಸಗಳ ಬಗ್ಗೆ ಯಾವುದೇ ತನಿಖೆಯನ್ನು ಬೇಕಿದ್ದರೂ ಮಾಡಿಸಬಹುದು. ನಾನು ಇದನ್ನು ಸಕರಾತ್ಮಕವಾಗಿ ಸ್ವೀಕರಿಸುತ್ತೇನೆ'' ಎಂದು ಯು.ಟಿ.ಖಾದರ್ ಹೇಳಿದ್ದಾರೆ.

Next Post Previous Post