BREAKING NEWS : ಸಿಎಂ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಅಂತ್ಯ : ಕೆಲವೇ ಕ್ಷಣಗಳಲ್ಲಿ ಮಹತ್ವದ ಸುದ್ದಿಗೋಷ್ಠಿ.!
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಆಹ್ವಾನಿಸಿದ್ದು, ಇದೀಗ ಬ್ರೇಕ್ ಫಾಸ್ಟ್ ಮೀಟಿಂಗ್ ಅಂತ್ಯವಾಗಿದೆ.
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.
ಶಿವಕುಮಾರ್ ಅವರು ಉಪಹಾರ ಸೇವಿಸಿದ್ದಾರೆ.ಇದೀಗ ಬ್ರೇಕ್ ಫಾಸ್ಟ್ ಮೀಟಿಂಗ್ ಅಂತ್ಯವಾಗಿದ್ದು, ಕೆಲವೇ ಕ್ಷಣಗಳಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿ ಇಬ್ಬರು ನಾಯಕರು ಮಾಹಿತಿ ನೀಡುವ ಸಾಧ್ಯತೆ ಇದೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇಂದು ಉಪಾಹಾರಕ್ಕೆ ಅವರನ್ನು ಆಹ್ವಾನಿಸಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣ ಕೂಡ ಹಾಜರಿದ್ದರು.