ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಡಾ.ಹಾಜಿ. ಎಸ್ ಅಬೂಬಕರ್ ಆರ್ಲಪದವು
ಪುತ್ತೂರು: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಡಾ.ಹಾಜಿ.ಯಸ್.ಅಬೂಬಕ್ಕರ್ ಆರ್ಲಪದವು ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ . ದಕ್ಷಿಣ ಕನ್ನಡ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ರವರ ಆದೇಶದ ಮೇರೆಗೆ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ಅವರ ಶಿಫಾರಸ್ಸಿನ ಮೇರೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಹಾಜಿ ಅಬ್ದುಲ್ ರಹಿಮಾನ್ ಆಜಾದ್ ಅವರು ನೇಮಕ ಮಾಡಿ ಆದೇಶಿಸಿದ್ದಾರೆ.
ಶಾಸಕ ಅಶೋಕ್ ಕುಮಾರ್ ರೈ ಇವರು ಡಾ. ಹಾಜಿ ಯಸ್.ಅಬೂಬಕ್ಕರ್ ಆರ್ಲಪದವು ರವರಿಗೆ ಆದೇಶ ಪತ್ರ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮುಹಮ್ಮದ್ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ, ಮುಹಮ್ಮದ್ ಹಾಜಿ ಬಡಗನ್ನೂರು, ಇಬ್ರಾಹಿಂ ಗೋಳಿಕಟ್ಟೆ, ವಿ.ಕೆ.ಶರೀಫ್ ಬಪ್ಪಳಿಗೆ, ಬಶೀರ್ ಕೌಡಿಚ್ಚಾರ್, ಯಾಕೂಬ್ ಮುಲಾರ್ ,ಅನ್ವರ್ ಖಾಸಿಂ,ಶಿಹಾಬ್ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು ಡಾ.ಹಾಜಿ.ಎಸ್ ಅಬೂಬಕ್ಕರ್ ಆರ್ಲಪದವು ಹಲವಾರು ಸಂಘಟನೆಗಳಲ್ಲಿ ಸಕ್ರಿಯರಾಗಿದ್ದು ಪ್ರಸಕ್ತ ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.