ಪಾಣಾಜೆ: ಇಂದು ಡಿ.6 ಸುಬೋಧ ಪ್ರೌಢಶಾಲೆ ವಾರ್ಷಿಕೋತ್ಸವ


ಪುತ್ತೂರು: ಪಾಣಾಜೆ ವಿದ್ಯಾವರ್ಧಕ  ಸಂಘ ಹಾಗೂ ಸುಬೋಧ ಪ್ರೌಢಶಾಲೆ ಪಾಣಾಜೆ ಆಶ್ರಯದಲ್ಲಿ ಶಾಲೆಯ ವಾರ್ಷಿಕೋತ್ಸವ ಇಂದು ನಡೆಯಲಿದೆ.

ಬೆಳಗ್ಗೆ 9.30ಕ್ಕೆ ಧ್ವಜ ವಂದನೆ, 10ರಿಂದ ಛದ್ಮವೇಷ ಸ್ಪರ್ಧೆ, ಸಂಜೆ 5.30 ರಿಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಉಪೇಂದ್ರ ಬಲ್ಯಾಯ ದೇವಸ್ಯ ಅಧ್ಯಕ್ಷತೆ ಯಲ್ಲಿ ಸಭಾ ಕಾಠ್ಯಕ್ರಮ ನಡೆಯಲಿದೆ.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಎಸ್‌ಆರ್‌ಕೆ ಲ್ಯಾಡರ್ಸ್‌ ಮಾಲೀಕ ಕೇಶವ ಅಮೈ, ಶಾಲೆಯ ಪ್ರಥಮ ಬ್ಯಾಚಿನ ಹಿರಿಯ ವಿದ್ಯಾರ್ಥಿ ಅಬ್ದುಲ್ ರೆಹಮಾನ್, ಜ್ಯೋತಿಷಿ ಲೋಕೇಶ್ ಬಲ್ಯಾಯ ದೊಡ್ಡಡ್ಕ, ಶಾಲಾ ಸಂಚಾಲಕ ಮಹಾಬಲೇಶ್ವರ ಭಟ್ ಗಿಳಿಯಾಲು, ಮುಖ್ಯ ಶಿಕ್ಷಕಿ ನಿರ್ಮಲ ಕೆ., ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರ ಭಂಡಾರಿ ಬೈಂಕ್ರೋಡು, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಡಾ.ಹಾಜಿ ಎಸ್.ಅಬೂಬಕ್ಕರ್ ಆರ್ಲಪದವು ಮತ್ತಿತರರು ಉಪಸ್ಥಿತರಿರಲಿದ್ದಾರೆ.
ರಾತ್ರಿ 7.30ರಿಂದ ಮನರಂಜನಾ |ಕಾಠ್ಯಕ್ರಮ ನಡೆಯಲಿದೆ.
Next Post Previous Post