BREAKING : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ : ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 17 ಪ್ರಯಾಣಿಕರು ಸಜೀವ ದಹನ.!

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಲಾರಿ ಮತ್ತು ಸ್ಲೀಪರ್ ಕೋಚ್ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.


ಲಾರಿಯೊಂದು ಡಿವೈಡರ್ ದಾಟಿ ಎದುರುಗಡೆಯಿಂದ ಬರುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಹೊತ್ತಿ ಉರಿದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಡಿಕ್ಕಿಯ ರಭಸಕ್ಕೆ ಬಸ್ ರಸ್ತೆ ಮಧ್ಯೆಯಲ್ಲೇ ಬೆಂಕಿಗಾಹುತಿಯಾಯಿತು ಎನ್ನಲಾಗಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಿಸಿದ ಕಾರಣ ಬಸ್‌ ನೊಳಗಿದ್ದ ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ಪ್ರಾಣ ಕಳೆದುಕೊಂಡಿದ್ದಾರೆ. ಲಾರಿ ಹಿರಿಯೂರಿನಿಂದ ಬೆಂಗಳೂರಿನತ್ತ ಸಾಗುತ್ತಿದ್ದರೆ, ಬಸ್ ಬೆಂಗಳೂರಿನಿಂದ ಶಿವಮೊಗ್ಗದತ್ತ ಪ್ರಯಾಣಿಸುತ್ತಿತ್ತು. ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ಕಂಟೇನರ್ ಲಾರಿ ಚಾಲಕ ಕುಲದೀಪ್ ಮೃತಪಟ್ಟಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, 32 ಆಸನಗಳ ಸಾಮರ್ಥ್ಯದ ಬಸ್‌ನಲ್ಲಿ 29 ಮಂದಿ ಪ್ರಯಾಣಿಸುತ್ತಿದ್ದರು. ಇವರಲ್ಲಿ 15 ಮಹಿಳೆಯರು ಮತ್ತು 14 ಪುರುಷರು ಸೇರಿದ್ದಾರೆ. ಹೆಚ್ಚಿನ ಪ್ರಯಾಣಿಕರು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮೂಲದವರಾಗಿದ್ದು, ಉಳಿದವರು ಕುಮಟಾ ಮತ್ತು ಶಿವಮೊಗ್ಗದವರು. ಬಸ್ ಚಾಲಕ, ನಿರ್ವಾಹಕ ಸೇರಿದಂತೆ ಕೆಲವರು ಸಮಯಪ್ರಜ್ಞೆಯಿಂದ ಬಸ್‌ನಿಂದ ಹೊರ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸುಮಾರು 30 ಕಿಲೋಮೀಟರ್‌ವರೆಗೆ ಸಂಚಾರ ದಟ್ಟಣೆ ಉಂಟಾಗಿದ್ದು, ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

 ಬೆಂಗಳೂರಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್‌ ಕೋಚ್ ಬಸ್‌ನಲ್ಲಿ ಡ್ರೈವರ್ ಕಂಡಕ್ಟರ್ ಸೇರಿ 30 ಜನ ಪ್ರಯಾಣಿಸುತ್ತಿದ್ದರು. ಆದರೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ‌ ಜವನಗೊಂಡಹಳ್ಳಿ ಬಳಿ ಬಸ್‌ ಅತೀ ವೇಗವಾಗಿ ಕಂಟೇನರ್ಗೆ ಡಿಕ್ಕಿ ಹೊಡೆದಿದ್ದು ನೋಡ ನೋಡುತ್ತಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ಕೆನ್ನಾಲಿಗೆಗೆ ಬಸ್‌ನಲ್ಲಿದ್ದ 20ಕ್ಕೂ ಅಧಿಕ ಮಂದಿ ಸುಟ್ಟು ಕರಕಲಾಗಿದ್ದಾರೆನ್ನಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.




ಬೆಂಕಿ ತಗುಲಿದ ಬೆನ್ನಿಗೇ ಕೆಲ ಪ್ರಯಾಣಿಕರು ಇಳಿದಿದ್ದಾರೆ. ಆದರೆ ಅಷ್ಟರಲ್ಲೇ ಬೆಂಕಿ ಹರಡಿಕೊಂಡಿದ್ದು, ಅಧಿಕ ಮಂದಿ ಇದರಲ್ಲಿ ಸಿಲುಕಿ ಪ್ರಾಣ ಬಿಟ್ಟಿದ್ದಾರೆ. ಇನ್ನು ಅಪಘಾತದ ಮಾಹಿತಿ ಪಡೆದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳುತ್ತಿದ್ದಾರೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಕ್ಷಣಾರ್ಧದಲ್ಲಿ ಹೊತ್ತಿಕೊಂಡ ಬೆಂಕಿ

ರಾತ್ರಿ 12 ಗಂಟೆಗೆ ಬೆಂಗಳೂರಿನಿಂದ ಗೋಕರ್ಣದತ್ತ ತೆರಳುತ್ತಿದ್ದ ಈ ಬಸ್‌ ರಾತ್ರಿ 2:45 ರ ಸುಮಾರಿಗೆ ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ. ಕ್ಷಣಮಾತ್ರದಲ್ಲೇ ಬೆಂಕಿ ಕಾಣಿಸಿಕೊಂಡಿದ್ದು, ಹಲವಾರು ಮಂದಿ ಅಷ್ಟರಲ್ಲಾಗಲೇ ನಿದ್ದೆಗೆ ಜಾರಿದ್ದರು. ಅಲ್ಲದೇ ಏಕಾಏಕಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಕೇವಲ 10 ಮಂದಿ ಮಾತ್ರ ಇಳಿಯಲು ಸಾಧ್ಯವಾಗಿದೆ. ಅವರಲ್ಲೂ ಬಹುತೇಕರಿಗೆ ಸುಟ್ಟ ಗಾಯಗಳಾಗಿವೆ ಎನ್ನಲಾಗಿದೆ.



20 ಕಿಲೋಮೀಟರ್ ಮೀಟರ್ ಟ್ರಾಫಿಕ್ ಜಾಮ್

ಇನ್ನು ಮುಂಜಾನೆ ಸಂಭವಿಸಿದ ಈ ಅಪಘಾತದಿಂದ ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಶಿರಾ ಹಿರಿಯೂರು ನಡುವೆ ಸುಮಾರು 20 ಕಿಲೋಮೀಟರ್ ದೂರ ವಾಹನಗಳು ನಿಂತಿವೆ. ಆಂಬುಲೆನ್ಸ್‌ಗಳು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.

Next Post Previous Post