BREAKING NEWS: ಕಾಂಗ್ರೆಸ್ ಹಿರಿಯ ನಾಯಕ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (95) ಅವರು ವಿಧಿವಶರಾಗಿದ್ದಾರೆ.


ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.


ಉಸಿರಾಟದ ಸಮಸ್ಯೆಯಿಂದ ಅವರು ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಕಳೆದ ಒಂದು ತಿಂಗಳಿನಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 95 ವರ್ಷದಲ್ಲೂ ಶಾಸಕರಾಗಿ ಗುರುತಿಸಿಕೊಂಡಿದ್ದ ಶಿವಶಂಕರಪ್ಪ ಏಕೈಕ ಹಿರಿಯ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದವರು ಇದೀಗ ಅವರು ಶಿವೈಕ್ಯರಾಗಿದ್ದಾರೆ.
Next Post Previous Post