ಕಂಕನಾಡಿ ಬೈಪಾಸ್ ರಸ್ತೆಯ ದುರಸ್ತಿ ಕಾರ್ಯಕ್ಕೆ ವೇಗ, ಸ್ಥಳದಲ್ಲೇ ನಿಂತು ಪರಿಶೀಲನೆ ನಡೆಸಿದ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೊಹಮ್ಮದ್ ಬಷೀರ್

ಮಂಗಳೂರು: ಕಂಕನಾಡಿ ಬೈಪಾಸ್ ರಸ್ತೆಯು ಕಳೆದ ಹಲವು ವರ್ಷಗಳಿಂದ ಹದಗೆಟ್ಟ ಸ್ಥಿತಿಯಲ್ಲಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರಿಗೆ, ವಿಶೇಷವಾಗಿ ಮದಾ ಚಾರಿಗಳಿಗೆ, ವಿದ್ಯಾರ್ಥಿಗಳಿಗೆ ಹಾಗೂ ಬಸ್ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿತ್ತು. ರಸ್ತೆ ಹಾಳಾಗಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿ ಜನರು ದಿನನಿತ್ಯ ಬೇಸರ ವ್ಯಕ್ತಪಡಿಸುತ್ತಿದ್ದರು.

ಈ ಬಗ್ಗೆ ಮೊಹಮ್ಮದ್ ಬಷೀರ್ ರವರು ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್‌ ರವರಿಗೆ ಲಿಖಿತವಾಗಿ ದೂರು ಸಲ್ಲಿಸಿ, ಶೀಘ್ರ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಜನರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಗುತ್ತಿಗೆದಾರರ ಮೂಲಕ ರಸ್ತೆ ದುರಸ್ತಿ ಕಾಮಗಾರಿಯನ್ನು ಆರಂಭಿಸಲಾಯಿತು.

ಕಾಮಗಾರಿಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ *ಮೊಹಮ್ಮದ್ ಬಷೀರ್* ಅವರು ಸ್ಥಳಕ್ಕೆ ಭೇಟಿ ನೀಡಿ, ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ನೇರವಾಗಿ ಪರಿಶೀಲಿಸಿದರು. 

ಕೇವಲ ಭೇಟಿ ನೀಡುವುದಕ್ಕೆ ಸೀಮಿತವಾಗದೆ, ಕೆಲಸ ಸಂಪೂರ್ಣವಾಗಿ ಮುಗಿಯುವವರೆಗೆ ಸ್ಥಳದಲ್ಲೇ ಇದ್ದು, ಪೌರಕಾರ್ಮಿಕರೊಂದಿಗೆ ಸಂವಾದ ನಡೆಸಿ ಅವರ ಕೆಲಸ ಕಾರ್ಯಗಳನ್ನು ಗಮನಿಸಿದರು. ಕಾಮಗಾರಿ ಗುಣಮಟ್ಟದೊಂದಿಗೆ ಹಾಗೂ ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುವಂತೆ ಅಗತ್ಯ ಸ
Next Post Previous Post