ಪುತ್ತೂರು: ತಾಲೂಕು ಮಟ್ಟದ ಮಿಮಿಕ್ರಿ ಸ್ಪರ್ಧೆಯಲ್ಲಿ ಸುಬೋಧ ಪ್ರೌಢ ಶಾಲೆಯ ಅಮನ್ ರೈಗೆ ಪ್ರಥಮ ಸ್ಥಾನ


ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿಯಲ್ಲಿ ಇಂದು ನಡೆದ ಪುತ್ತೂರು ಹಾಗೂ ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ 2025-26, ಪ್ರೌಢ ವಿಭಾಗದ ಮಿಮಿಕ್ರಿ ಸ್ಪರ್ಧೆಯಲ್ಲಿ 




ಪಾಣಾಜೆ ಸುಬೋಧ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಅಮನ್ ರೈ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಅಮನ್ ರೈ ಸುಬೋಧ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸುಧೀರ್ ಎಸ್ ಪಿ ಹಾಗೂ ಶ್ರೀಮತಿ ಧನ್ಯ ಅವರ ಪುತ್ರ
ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು ಸಂಚಾಲಕರು ಸುಬೋಧ ಪ್ರೌಢ ಶಾಲೆ ಪಾಣಾಜೆ.
Next Post Previous Post