ಸುಬೋಧ ಪ್ರೌಢಶಾಲೆಯಲ್ಲಿ ಕ್ರೀಡಾಕೂಟ


ಪುತ್ತೂರು: ಪಾಣಾಜೆ ಸುಬೋಧ ಪ್ರೌಢಶಾಲೆಯ ವಾರ್ಷಿಕ ಕ್ರೀಡೋತ್ಸವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಉಪೇಂದ್ರ ಬಲ್ಯಾಯ ದೇವಸ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.



ಶಾಲಾ ಹಿರಿಯ ವಿದ್ಯಾರ್ಥಿ, ಆದರ್ಶ ಕೃಷಿಕ ಕೆದಂಬಾಡಿ ಲಕ್ಷ್ಮೀನಾರಾಯಣ ರೈ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣದ ಮೂಲಕ ಕ್ರೀಡಾಕೂಟ ಉದ್ಘಾಟಿಸಿ ಮಕ್ಕಳಿಗೆ ಹಿತವಚನವನ್ನು ಹೇಳಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಸುಧೀರ್ ಎಸ್ ಪಿ ಅವರ ನಿರ್ದೇಶನದಲ್ಲಿ ಕ್ರೀಡಾ ತಂಡಗಳ ಆಕರ್ಷಕ ಪಥ ಸಂಚಲನ ಹಾಗೂ ಏರೋಬಿಕ್ಸ್ ಪ್ರದರ್ಶನ ನಡೆಯಿತು.


ಶಾಲಾ ವಿದ್ಯಾರ್ಥಿನಿ ಲಾವಣ್ಯ ಕೆ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿನಿ ಸಿಂಚನಾ ಎಸ್ ಪ್ರಾರ್ಥಿಸಿದರು. ಶಾಲಾ ಸಂಚಾಲಕ ಗಿಳಿಯಾಲು ಮಹಾಬಲೇಶ್ವರ ಭಟ್ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ನಿರ್ಮಲ ವಂದಿಸಿದರು. ಸಹ ಶಿಕ್ಷಕಿ ವಿನುತಾ ಕುಮಾರಿ ನಿರೂಪಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಡಾ. ಹಾಜಿ ಎಸ್ ಅಬೂಬಕ್ಕರ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರ ಭಂಡಾರಿ ಬೈಂಕ್ರೋಡು, ದ.ಕ ಜಿ ಪ ಹಿರಿಯ ಪ್ರಾಥಮಿಕ ಶಾಲೆ ಪಾಣಾಜೆ ಇದರ ದೈಹಿಕ ಶಿಕ್ಷಣ ಶಿಕ್ಷಕರಾದ ಸುಧಾಕರ ರೈ, ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಈಶ್ವರ ಭಟ್, ಸಹ ಶಿಕ್ಷಕರು, ಮಕ್ಕಳ ಹೆತ್ತವರು ಉಪಸ್ಥಿತರಿದ್ದರು.
Next Post Previous Post