BREAKING: KASARGOD | ತೆಕ್ಕಿಲ್ ನಲ್ಲಿ ಭೀಕರ ರಸ್ತೆ ಅಪಘಾತ: ಮಂಗಳೂರಿನ ಇಬ್ಬರು ಯುವಕರು ಮೃತ್ಯು
ಕಾಸರಗೋಡು: ಕಾಸರಗೋಡಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳೂರಿನ ಇಬ್ಬರು ಯುವಕರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಘಟನೆ ರಾಷ್ಟೀಯ ಹೆದ್ದಾರಿಯ ಚಟ್ಟಂಚಾಲ್ ತೆಕ್ಕಿಲ್ ಎಂಬಲ್ಲಿ ನಡೆದಿದೆ.
ಮೃತರನ್ನು ದ.ಕ. ಜಿಲ್ಲೆಯ ಸಜಿಪ ಬೈಲಗುತ್ತು ನಿವಾಸಿ ದಿ.ಎಸ್.ಬಿ.ಮುಹಮ್ಮದ್ ಎಂಬವರ ಪುತ್ರ ಆಸಿಫ್ ಮುಹಮ್ಮದ್(41) ಮತ್ತು ನಾಟೆಕಲ್ ನಿವಾಸಿ ಅಬ್ಬಾಸ್ ಹಾಜಿ ಎಂಬವರ ಪುತ್ರ ಮುಹಮ್ಮದ್ ಶಫೀಕ್(23) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ವಯನಾಡಿಗೆ ತೆರಳಿದ್ದ ಐವರು ಗೆಳೆಯರು, ಸೋಮವಾರ ರಾತ್ರಿ ಊರಿಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇವರು ಪ್ರಯಾಣಿಸುತ್ತಿದ್ದ ಬಿಎಂಡಬ್ಲ್ಯು ಕಾರು ಚಟ್ಟಂಚಾಲ್ ತೆಕ್ಕಿಲ್ ಎಂಬಲ್ಲಿಗೆ ತಲುಪಿದಾಗ ಲಾರಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.