BREAKING NEWS: ವಿಮಾನ ದುರಂತ: ಮಹಾರಾಷ್ಟ್ರ DCM 'ಅಜಿತ್ ಪವಾರ್' ಸೇರಿ 6 ಮಂದಿ ದುರ್ಮರಣ


ಬಾರಾಮತಿ: ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನಗೊಂಡು, DCM 'ಅಜಿತ್ ಪವಾರ್' ಸೇರಿ 5 ಮಂದಿ ದುರ್ಮರಣಕ್ಕೀಡಾಗಿದ್ದಾರೆ ಎಂದು ತಿಳಿದು ಬಂದಿದೆ.ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ (ಹೆಲಿಕಾಪ್ಟರ್) ಅಪಘಾತಕ್ಕೀಡಾಗಿರುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಈ ಘಟನೆಯು ಅವರ ಸ್ವಕ್ಷೇತ್ರವಾದ ಬಾರಾಮತಿಯಲ್ಲಿ ನಡೆದಿದೆ. ದುರಂತದಲ್ಲಿ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯ ವಿವರಗಳು:

ಬಾರಾಮತಿ ಕ್ಷೇತ್ರದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಭಾರಿ ಪ್ರಮಾಣದ ಬೆಂಕಿ ಮತ್ತು ದಟ್ಟವಾದ ಹೊಗೆ ಆವರಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.ಬಾರಾಮತಿಯಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಆಗುವ ಸಂದರ್ಭದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಈ ಅವಘಡ ಸಂಭವಿಸಿದೆ. ಸ್ಥಳೀಯ ಪೊಲೀಸರು ಮತ್ತು ತುರ್ತು ಸೇವಾ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಘಟನೆ ನಡೆದ ಸಮಯ: ಬುಧವಾರ (ಜನವರಿ 28, 2026) ಬೆಳಿಗ್ಗೆ ಸುಮಾರು 8:45 ರಿಂದ 9:00 ಗಂಟೆಯ ನಡುವೆ ಈ ಅವಘಡ ಸಂಭವಿಸಿದೆ.

· ಪ್ರಯಾಣದ ವಿವರ: ಅಜಿತ್ ಪವಾರ್ ಅವರು ಮುಂಬೈನಿಂದ ತಮ್ಮ ಸ್ವಕ್ಷೇತ್ರವಾದ ಬಾರಾಮತಿಗೆ ನಾಲ್ಕು ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದರು.

· ಅಪಘಾತದ ಕಾರಣ: ವಿಮಾನವು ರನ್‌ವೇಯಲ್ಲಿ ಇಳಿಯುವ ಸಮಯದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ತುರ್ತು ಲ್ಯಾಂಡಿಂಗ್‌ಗೆ ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಪಕ್ಕಕ್ಕೆ ಸರಿದು ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.

· ಸಾವು-ನೋವು: ಲಭ್ಯವಿರುವ ಅಧಿಕೃತ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ ಅಜಿತ್ ಪವಾರ್ ಸೇರಿದಂತೆ ಅವರ ಭದ್ರತಾ ಸಿಬ್ಬಂದಿ ಮತ್ತು ಪೈಲಟ್‌ಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ (ಒಟ್ಟು 4 ರಿಂದ 6 ಜನರು ವಿಮಾನದಲ್ಲಿದ್ದರು ಎನ್ನಲಾಗಿದೆ).

· ಪ್ರತಿಕ್ರಿಯೆ: ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ತುರ್ತು ರಕ್ಷಣಾ ತಂಡಗಳು ಧಾವಿಸಿ ಬೆಂಕಿಯನ್ನು ನಂದಿಸಿವೆ. ವಿಮಾನವು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.


Next Post Previous Post