BREAKING NEWS: ರಾಜ್ಯದ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗೆ ಪೂರ್ವ ಸಿದ್ಧತೆಗೆ ಸರ್ಕಾರ ಸೂಚನೆ: ಶೀಘ್ರವೇ ಎಲೆಕ್ಷನ್ ಗೆ ಡೇಟ್ ಫಿಕ್ಸ್


ಬೆಂಗಳೂರು: 2026-31ನೇ ಸಾಲಿನ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸರ್ಕಾರ ಸೂಚಿಸಿದೆ. ಆ ಮೂಲಕ ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಶೀಘ್ರವೇ ದಿನಾಂಕ ಘೋಷಣೆಯ ಸುಳಿವು ಹೊರಬಿದ್ದಿದೆ.

ಈ ಕುರಿತಂತೆ ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಅದರಲ್ಲಿ 2020-25ನೇ ಅವಧಿಯ ಗ್ರಾಮ ಪಂಚಾಯಿತಿಗಳ ಅವಧಿಯು 2026 ರ ಜನವರಿ ಮಾಹೆಯಿಂದ ಪೂರ್ಣಗೊಳ್ಳಲು ಪ್ರಾರಂಭವಾಗಿದ್ದು, ಸದರಿ ಅವಧಿಯು ಮುಕ್ತಾಯಗೊಳ್ಳುವ ಗ್ರಾಮ ಪಂಚಾಯಿತಿಗಳಿಗೆ 2025ರ ಡಿಸೆಂಬರ್ ಮಾಹೆಯಲ್ಲಿ ಸಾರ್ವತ್ರಿಕ ಚುನಾವಣೆಯನ್ನು ನಡೆಸಬೇಕಾಗಿದ್ದು,

 ಸಾರ್ವತ್ರಿಕ ಚುನಾವಣೆ ನಡೆಸುವ ಆರು ತಿಂಗಳು ಮುಂಚಿತವಾಗಿ ಮತದಾರರ ಪಟ್ಟಿ ಮುದ್ರಣ ಒಳಗೊಂಡಂತೆ, ಇತರ ಎಲ್ಲಾ ಪೂರ್ವಭಾವಿ ಸಿದ್ಧತೆಗಳನ್ನು ಆಯೋಗವು ಮಾಡಿಕೊಳ್ಳಬೇಕಾಗಿರುತ್ತದೆ. ಆದುದರಿಂದ ನಿಗಧಿತ ಕಾಲಮಿತಿಯಲ್ಲಿ ಮೀಸಲಾತಿಯ ಅಧಿಸೂಚನೆಯನ್ನು ಹೊರಡಿಸಿ, ಅದರ ಪ್ರತಿಗಳನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಒದಗಿಸುವಂತೆ ಆಯುಕ್ತರು, ರಾಜ್ಯ ಚುನಾವಣಾ ಆಯೋಗ, ಕರ್ನಾಟಕರವರು ಕೋರಿರುತ್ತಾರೆ ಎಂದಿದ್ದಾರೆ.

ಪುಸ್ತುತ ಬಹುತೇಕ ಗ್ರಾಮ ಪಂಚಾಯಿತಿಗಳ ಅವಧಿಯು ಜನವರಿ-2026 ತಿಂಗಳನಿಂದ ಮಾರ್ಚ್- 2026 ತಿಂಗಳವರೆಗೆ ಮುಕ್ತಾಯ ಗೊಳ್ಳುತ್ತಿರುವುದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಅಡಿಯಲ್ಲಿ ಗ್ರಾಮ ಪಂಚಾಯಿತಿಗಳಿಗೆ 2026-31ನೇ ಸಾಲಿನ ಗ್ರಾಮ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆ ನಡೆಸಲು ಬೇಕಾಗಿರುವ ಎಲ್ಲಾ ಅಗತ್ಯ. ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಮಗೆ ಸೂಚಿಸಿದ್ದಾರೆ.

ಮುಂದುವರೆದು, ಜಿಲ್ಲಾಧಿಕಾರಿಗಳು ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ, ತೆಗೆದುಕೊಂಡ ಕ್ರಮದ ಬಗ್ಗೆ ವರದಿಯನ್ನು ಸರ್ಕಾರಕ್ಕೆ ಮತ್ತು ರಾಜ್ಯ ಚುನಾವಣೆ ಆಯೋಗ, ಕರ್ನಾಟಕರವರಿಗೆ ಸಲ್ಲಿಸುವಂತೆ ತಮಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದಾರೆ.





Previous Post