BREAKING : ಬಳ್ಳಾರಿ ಗಲಾಟೆ & ಫೈರಿಂಗ್ ಪ್ರಕರಣ : ಸಸ್ಪೆಂಡ್ ಆಗಿದ್ದ SP ಪವನ್ ನಜ್ಜುರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ!
ಇದರಿಂದ ತೀವ್ರವಾಗಿ ನೊಂದಿದ್ದರು ಎನ್ನಲಾಗಿದೆ.
ತುಮಕೂರು ಜಿಲ್ಲೆ ಶಿರಾದ ಬರಗೂರಿನ ಫಾರ್ಮ್ ಹೌಸ್ ನಲ್ಲಿ ಪವನ್ ನಜ್ಜೂರ್ ಅವರು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಸದ್ಯ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ.
ಬ್ಯಾ ನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿತ್ತು.
ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಪೊಲೀಸರು ಸಫಲವಾಗಿದ್ದಾರೆ. ಘಟನೆಯನ್ನು ಹಿರಿಯ ಅಧಿಕಾರ ಗಮನಕ್ಕೆ ಬಂದಿಲ್ಲ ಎಂದು ಡಿಜಿ & ಐಡಜಿಪಿ ವರದಿ ನೀಡಿದೆ. ಹೀಗಾಗಿ ಪವನ್ ಅವರನ್ನು ಅಮಾನತು ಮಾಡುವಂತೆ ಬಳ್ಳಾರಿ ಡಿಐಜಿ ವರ್ತಿಕಾ ಕಟಿಯಾರ ಅವರು ಸರ್ಕಾರಕ್ಕೆ ವರದಿ ನೀಡಿದ್ದರು.
40 ಮಂದಿ ವಶಕ್ಕೆ
ಬಳ್ಳಾರಿ ಫೈರಿಂಗ್ ಪ್ರಕರಣದ ತನಿಖೆ ಚುರುಗೊಳಿಸಿದ ಪೊಲೀಸರು ಸುಮಾರು 40 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ, ಘರ್ಷಣೆಗಳು ನಡೆದು ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತನೋರ್ವ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಬಳ್ಳಾರಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಬಳ್ಳಾರಿ ಫೈರಿಂಗ್ ಪ್ರಕರಣದ ವಿಡಿಯೋಗಳನ್ನಾಧರಿಸಿದ ಪೊಲೀಸರು ತನಿಖೆ ನಡೆಸಿ ಎರಡೂ ಕಡೆಯಿಂದ 40 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇತ್ತ, ಜನಾರ್ಧನ ರೆಡ್ಡಿ ಮನೆ ಬಳಿ ಗುಂಡಿನ ದಾಳಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗಂಗಾವತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಭರತ್ ರೆಡ್ಡಿಯನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ರೆಡ್ಡಿ ವಿರುದ್ಧ ಸಿಎಂ , ಗೃಹ ಸಚಿವರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.