ಮಂಗಳೂರಿಗೆ ರೈತೋದಯ ಹಸಿರು ಸೇನೆಯ ಅಧ್ಯಕ್ಷ ಚಂದ್ರಶೇಖರ್ ಬಿ.ಟಿ ಭೇಟಿ


ಮಂಗಳೂರು: ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಚಂದ್ರಶೇಖರ್ ಬಿ.ಟಿ ಅವರು ಮಂಗಳೂರಿಗೆ ಭೇಟಿ ನೀಡಿ ವಕೀಲರೊಂದಿಗೆ ಸಮಾಲೋಚನೆ ನಡೆಸಿದರು.

ಸಾಮಾಜಿಕ ಕಳಕಳಿಯುಳ್ಳ ಹೋರಾಟಗಾರರಾಗಿರುವ ಅವರು, ರೈತಪರ ಸಮಸ್ಯೆಗಳಿದ್ದಾಗ ಮೊದಲಿಗರಾಗಿ ಧ್ವನಿ ಎತ್ತುವ ನಾಯಕರಾಗಿದ್ದು, ಜನರ ಅಭಿವೃದ್ಧಿ ಬಗ್ಗೆ ಉತ್ತಮ ಆಲೋಚನೆ ಹೊಂದಿರುವ ನೆಚ್ಚಿನ ನಾಯಕನಾಗಿ ಜನರ ಪ್ರೀತಿಯನ್ನು ಗಳಿಸಿಕೊಂಡಿದ್ದಾರೆ.

ಚಿತ್ರದುರ್ಗದಲ್ಲಿ ನಡೆದ 1008 ರೈತರ ಸಾಮೂಹಿಕ ವಿವಾಹ ಮಹೋತ್ಸವದ ಯಶಸ್ಸಿನ ನಂತರ, ಎಂದಿನಂತೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ರೈತ ಸಮುದಾಯದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ.

ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ರೈತರಿಗೆ ಕಾನೂನಾತ್ಮಕ ಸೌಲಭ್ಯಗಳು ಮತ್ತು ಹಕ್ಕುಗಳ ಕುರಿತು ಚರ್ಚೆ ನಡೆಯಿತು. “ಅನ್ನದಾತೋ ಸುಖೀಭವ” ಎಂಬ ಆಶಯದೊಂದಿಗೆ ರೈತ ಚಳುವಳಿಗೆ ವಕೀಲರ ಸಹಕಾರ ಅಗತ್ಯವಿದೆ ಎಂದು ಅವರು ತಿಳಿಸಿದರು.

ಮುಂದಿನ ದಿನಗಳಲ್ಲಿ ಇಡೀ ಕರ್ನಾಟಕದಲ್ಲಿ ಬಲಿಷ್ಠ ವಕೀಲರ ತಂಡವನ್ನು ರಚಿಸಿ ಹೋರಾಟವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸಲು ಯೋಜನೆ ರೂಪಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸಿ, ಸಂಘಟನೆಯನ್ನು ಇನ್ನಷ್ಟು ವಿಸ್ತರಿಸುವ ಭರವಸೆ ನೀಡಿದರು.
Next Post Previous Post