ನಾಳೆ (ಏ.9) ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ – ಶಿಕ್ಷಣ ಇಲಾಖೆಯ ಸೂಚನೆ | – ಇದೇ ಮೊದಲ ಬಾರಿಗೆ ಫಲಿತಾಂಶ ಪ್ರಕಟವಾದ ದಿನವೇ ಡಿಜಿ ಲಾಕರ್‌ನಲ್ಲಿ ಅಂಕಪಟ್ಟಿ ಲಭ್ಯ Karnataka 2nd PUC result 2026


ಮಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ವಿದ್ಯಾರ್ಥಿಗಳಿಗೆ ಮಹತ್ವದ ಪ್ರಕಟಣೆ ಹೊರಡಿಸಲಾಗಿದೆ. 2026ನೇ ಸಾಲಿನ ದ್ವಿತೀಯ ಪಿಯುಸಿ (PUC) ಪರೀಕ್ಷೆಯ ಫಲಿತಾಂಶವನ್ನು 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://karresults.nic.in ಹಾಗೂ KarnatakaOne Mobile App ಮೂಲಕ ಪರಿಶೀಲಿಸಬಹುದಾಗಿದೆ. ಇದಲ್ಲದೆ, ಫಲಿತಾಂಶದ ಮಾಹಿತಿ ಮೊಬೈಲ್ SMS ಮುಖಾಂತರವೂ ವಿದ್ಯಾರ್ಥಿಗಳಿಗೆ ಕಳುಹಿಸಲಾಗುತ್ತದೆ.
ಪರೀಕ್ಷಾ ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು DigiLocker (https://www.digilocker.gov.in) ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ಇದರ ಜೊತೆಗೆ, ಅಂಕಪಟ್ಟಿ ಡೌನ್‌ಲೋಡ್ ಮಾಡುವ ವಿಧಾನವನ್ನು ತಿಳಿಯಲು ಒಂದು ವಿಡಿಯೋ ಲಿಂಕ್‌ನ್ನೂ ನೀಡಲಾಗಿದೆ.
ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೆ ಫಲಿತಾಂಶವನ್ನು ಪರಿಶೀಲಿಸಿ, ಮುಂದಿನ ವಿದ್ಯಾಭ್ಯಾಸದ ಬಗ್ಗೆ ತಯಾರಾಗಲು ಶಿಕ್ಷಣ ಇಲಾಖೆ ಸಲಹೆ ನೀಡಿದೆ.
Next Post Previous Post