ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಪಾಣಾಜೆ ದೈಹಿಕ ಶಿಕ್ಷಣ ಶಿಕ್ಷಕ ಸುಧಾಕರ ರೈ ಅವರಿಗೆ ಮಾಣಿಲ ಸರಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಕರಾಗಿ ಮುಂಬಡ್ತಿ


ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಪಾಣಾಜೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಧಾಕರ ರೈ ಅವರು ಇತ್ತೀಚೆಗೆ ನಡೆದ ಭಡ್ತಿ ಪ್ರಕ್ರಿಯೆಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರಾಗಿ ಮುಂಬಡ್ತಿ ಹೊಂದಿದ್ದಾರೆ.

ಬಡ್ತಿಗೊಂಡಿರುವ ಇವರನ್ನು ಮಾಣಿಲ ಸರಕಾರಿ ಪ್ರೌಢಶಾಲೆಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಪ್ರಾಥಮಿಕ ಶಾಲಾ ಹಂತದಲ್ಲಿ ವಿದ್ಯಾರ್ಥಿಗಳ ದೈಹಿಕ ಹಾಗೂ ಕ್ರೀಡಾ ಬೆಳವಣಿಗೆಗೆ ಅಪಾರವಾಗಿ ಶ್ರಮಿಸಿದ್ದ ಇವರು, ಇದೀಗ ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.

ಶಿಕ್ಷಕ ವೃಂದ, ಹಿರಿಯ ವಿದ್ಯಾರ್ಥಿಗಳು ಹಾಗೂ ಊರಿನ ಸಮಸ್ತರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದು, ಅವರ ಮುಂದಿನ ವೃತ್ತಿ ಜೀವನ ಮತ್ತಷ್ಟು ಉಜ್ವಲವಾಗಿರಲಿ ಎಂದು ಶುಭ ಹಾರೈಸಿದ್ದಾರೆ.
Next Post Previous Post