Breaking News: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ?!
ನವದೆಹಲಿ/ಬೆಂಗಳೂರು, (ಮೇ 26): ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಸಸ್ಪೆನ್ಸ್ ಈಗ ರೋಚಕ ತಿರುವು ಪಡೆದುಕೊಂಡಿದೆ. ದೆಹಲಿಯಲ್ಲಿ ನಡೆದ ಸುಮಾರು 6 ಗಂಟೆಗಳ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ನಾಯಕತ್ವ ಬದಲಾವಣೆ (karnataka power tussle) ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ (CM Siddaramaiah) ರಾಜ್ಯಸಭೆ ಆಫರ್ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಫರ್ ನೀಡಿದ್ದಾರೆ. ಇದಕ್ಕೆ ಯಾವುದೇ ಸಮ್ಮತಿ ಸೂಚಿಸದ ಸಿದ್ದರಾಮಯ್ಯ, ಸಭೆ ಬಳಿಕ ನೇರವಾಗಿ ಜಾರ್ಜ್ ನಿವಾಸದಲ್ಲಿದ್ದ ಆಪ್ತ ಸಚಿವರು, ಶಾಸಕರೊಂದಿಗೆ ರಹಸ್ಯ ಸಭೆ ನಡೆಸಿ ಚರ್ಚಿಸಿದ್ದು, ಈ ವೇಳೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೊಂದೆಡೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ ಎಂದು ಆಪ್ತರು ಸಿದ್ದರಾಮಯ್ಯಗೆ ಸಲಹೆ ನೀಡಿದ್ದು, ನಿಮ್ಮ ಪರವಾಗಿ ನಾವೇ ರಾಹುಲ್ ಗಾಂಧಿ ಬಳಿ ಮಾತನಾಡುತ್ತೇವೆ ಎಂದಿದ್ದಾರೆ. ಆದ್ರೆ, ಇದಕ್ಕೆ ಸಿದ್ದರಾಮಯ್ಯ, ಇಲ್ಲ, ನಾನು ರಾಹುಲ್ ಗಾಂಧಿಯವರನ್ನ ನಿರಾಕರಿಸಲು ಸಾಧ್ಯವಿಲ್ಲ. ನಾನು ರಾಜೀನಾಮೆ ಕೊಡುತ್ತೇನೆ, ನೀವು ಬೇಕಾದ್ರೆ ಹೋಗಿ ಮಾತಾಡಿ ಎಂದಿದ್ದಾರೆ ಎಂದು ತಿಳಿದುಬಂದಿದೆ
ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಸಸ್ಪೆನ್ಸ್ ಈಗ ಅತ್ಯಂತ ರೋಚಕ ತಿರುವು ಪಡೆದುಕೊಂಡಿದೆ. ದೆಹಲಿಯಲ್ಲಿ ನಡೆದ ಸುಮಾರು 6 ಗಂಟೆಗಳ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ, ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಬಿಗ್ ಆಫರ್ ನೀಡಿದೆ.
ರಾಜ್ಯದಲ್ಲಿ ಉಂಟಾಗಿರುವ ಮುಖ್ಯಮಂತ್ರಿ ಕುರ್ಚಿಯ ಬಿಕ್ಕಟ್ಟನ್ನು ಸೌಹಾರ್ದಯುತವಾಗಿ ಬಗೆಹರಿಸಲು ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರ ಮುಂದೆ ಹೊಸ ಸೂತ್ರವೊಂದನ್ನು ಇಟ್ಟಿದ್ದಾರೆ ಎನ್ನಲಾಗಿದೆ.
ವಿಧಾನ ಪರಿಷತ್ ಹಾಗೂ ಮುಂಬರುವ ರಾಜ್ಯಸಭಾ ಚುನಾವಣೆಗಳ ಬೆನ್ನಲ್ಲೇ ಈ ಸಭೆ ನಡೆದಿರುವುದರಿಂದ, ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸದಸ್ಯತ್ವ ನೀಡಿ, ಕೇಂದ್ರದಲ್ಲಿ ಪಕ್ಷದ ಪ್ರಮುಖ ಜವಾಬ್ದಾರಿ ವಹಿಸುವ ಆಫರ್ ಅನ್ನು ಹೈಕಮಾಂಡ್ ನೀಡಿದೆ ಎನ್ನಲಾಗಿದೆ. ಆ ಮೂಲಕ ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಡಲು ಹಾದಿ ಸುಗಮಗೊಳಿಸುವುದು ದೆಹಲಿ ನಾಯಕರ ಪ್ಲಾನ್ ಆಗಿತ್ತು ಎನ್ನಲಾಗಿದೆ.
ಹೈಕಮಾಂಡ್ ನೀಡಿದ ಈ ಆಫರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣಕ್ಕೆ ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ. ಕರ್ನಾಟಕದ ರಾಜಕಾರಣದಲ್ಲೇ ಮುಂದುವರಿಯಲು ತಮಗೆ ಹೆಚ್ಚಿನ ಆಸಕ್ತಿ ಇರುವುದಾಗಿ ಅವರು ಹೈಕಮಾಂಡ್ ನಾಯಕರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಸದ್ಯಕ್ಕೆ ತಾವೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದು, ಈಗಲೇ ಯಾವುದೇ ಪ್ರಮುಖ ನಿರ್ಧಾರ ಕೈಗೊಳ್ಳುವುದು ಸೂಕ್ತವಲ್ಲ ಎಂಬ ವಾದವನ್ನು ಅವರು ಮಂಡಿಸಿದ್ದಾರೆ ಎಂದು ತಿಳಿದುಬಂದಿದೆ