ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾರಾ ಲೀಗಲ್ ವಾಲೆಂಟಿಯರ್ ಆಗಿ ಡಾ. ಹಾಜಿ ಎಸ್. ಅಬೂಬಕ್ಕರ್ ಆರ್ಲಪದವು ನೇಮಕ


ಮಂಗಳೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾರಾ ಲೀಗಲ್ ವಾಲೆಂಟಿಯರ್ ಆಗಿ ಡಾ. ಹಾಜಿ. ಯಸ್ ಅಬೂಬಕ್ಕರ್ ಆರ್ಲಪದವು ನೇಮಕಗೊಂಡು ಜಿಲ್ಲಾ ನ್ಯಾಯಾಲಯದಲ್ಲಿ ತರಬೇತಿ ಪಡೆದುಕೊಂಡಿರುತ್ತಾರೆ .

ಇವರು ಹಲವಾರು ವರ್ಷಗಳಿಂದ ವಿವಿಧ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದು, ಸಮಾಜದ ಪ್ರಗತಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇವರ ಸುದೀರ್ಘ ಜನಪರ ಕಾರ್ಯಗಳು ಮತ್ತು ಸಾಮಾಜಿಕ ಕಳಕಳಿಯನ್ನು ಗುರುತಿಸಿ ಈಗಾಗಲೇ ಹಲವಾರು ಪ್ರತಿಷ್ಠಿತ ಪ್ರಶಸ್ತಿ, ಗೌರವಗಳು ಲಭಿಸಿವೆ.

ಪ್ರಸ್ತುತ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಇವರ ಸಮಾಜಮುಖಿ ಸೇವೆಯನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿಯನ್ನು ನೀಡಿದೆ. ಇನ್ಮುಂದೆ ಇವರು ಸಾಮಾನ್ಯ ಜನರಿಗೆ ಕಾನೂನು ಜಾಗೃತಿ ಮೂಡಿಸುವ ಹಾಗೂ  ಕಾನೂನು ನೆರವು ಒದಗಿಸುವಲ್ಲಿ ಪ್ರಾಧಿಕಾರದ ಜೊತೆಗೂಡಿ ಕಾರ್ಯನಿರ್ವಹಿಸಲಿದ್ದಾರೆ.
Previous Post