ಮಂಗಳೂರು: SIR ಕುರಿತು ಜಾಗೃತಿ ತರಬೇತಿ ಕಾರ್ಯಾಗಾರ
ಮಂಗಳೂರು: ಉಡುಪಿ ಮತ್ತು ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕರ್ನಾಟಕ ಪ್ರದೇಶ ಕಾಂಗ್ರೇಸ್ ಆದೇಶದಂತೆ ಮಂಗಳೂರು ಮಲ್ಲಿಕಟ್ಟೆ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ SIR ಕುರಿತು ತರಬೇತಿ ಕಾರ್ಯಗಾರವು ನಡೆಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿಯವರು ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಮಾಜಿ ಸಚಿವರಾದ ರಮಾನಾಥ ರೈ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾಜಿ ಶಾಸಕರಾದ ಜೆ ಆರ್ ಲೋಬೋ ಲೋಕಸಭಾ ಅಭ್ಯರ್ಥಿ ಪದ್ಮ ರಾಜ್ ಮಹಿಳಾ ಅಧ್ಯಕ್ಷೆ ಶಾಲೆಟ್ ಪಿಂಟೋ ದಿನೇಶ್ ಉಡುಪಿ ಇವರು ಉಪಸ್ಥಿತರಿದ್ದರು. ಜಾಗ್ರತ ಕರ್ನಾಟಕ ದ ಡಾ.ಬಸವರಾಜು ಬಿ.ಸಿ.ಮಾಹಿತಿ ಕಾರ್ಯಾಗಾರ ವನ್ನು ನಡೆಸಿ ಕೊಟ್ಟರು. ಸದ್ರಿ ಕಾರ್ಯಾಗಾರದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಪ್ರತಿನಿಧಿಗಳಾಗಿ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಡಾ.ಹಾಜಿ.ಯಸ್.ಅಬೂಬಕ್ಕರ್ ಆರ್ಲಪದವು,ಅಬ್ಬು ನವಗ್ರಾಮ, ಪ್ರವೀಣ್ ಪೂಜಾರಿ ಸಣ್ಣಗುತ್ತು ಸೇರಿದಂತೆ ಎರಡೂ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿದರು.